ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆ : ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಬೆಂಗಳೂರು : ಬೆಂಗಳೂರು ವಿವಿ ಹಾಸ್ಟೆಲ್​ನ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆ ಹಾಸ್ಟೆಲ್​ ವಾರ್ಡನ್​ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಆಹಾರ ನೀಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕಳಪೆ ಆಹಾರ ತಿಂದು ಆರೋಗ್ಯಕ್ಕೆ ಸಮಸ್ಯೆಯಾದರೆ ಯಾರು ಹೊಣೆ. ಕೂಡಲೇ ವಾರ್ಡನ್​ ಅಮಾನತುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಬಿರಿಯಾನಿ ತಿಂದು ಆಸ್ಪತ್ರೆ ಸೇರಿದ ಗ್ರಾಮಸ್ಥರು
ಚಿಕ್ಕಮಗಳೂರು : ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.error: Content is protected !!
Scroll to Top