ಬೆಂಗಳೂರು ಕಂಬಳಕ್ಕೆ ವಿವಾದಿತ ಬ್ರಿಜ್ ಭೂಷಣ್​ಗೆ ಆಮಂತ್ರಣ

ಬೆಂಗಳೂರು : ಬೆಂಗಳೂರು ತುಳುಕೂಟಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿರುವ ಬೆಂಗಳೂರು ತುಳುಕೂಟ ಮೊಟ್ಟಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳವನ್ನ ನಡೆಸುತ್ತಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ.

ನ. 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮೇರೆಗೆ ಕಂಬಳ ಸಮಿತಿ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾರತದ ಕುಸ್ತಿ ಫೆಡರೇಷನ್ ಮಾಜಿ ಆಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಿತ್ತು. ಆದರೆ ಈ ಕುರಿತು ವಿರೋಧದ ಹಿನ್ನೆಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ರೈ ಮಾಧ್ಯಮಕ್ಕೆ ಮಾಹಿತಿ‌ ನೀಡಿದ್ದು, ವಿರೋಧ ವ್ಯಕ್ತವಾದ ಹಿನ್ನಲೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.







































































error: Content is protected !!
Scroll to Top