ಟಿ20 ಸರಣಿಗೆ ಸೂರ್ಯಕುಮಾರ್‌ ಕ್ಯಾಪ್ಟನ್‌

ಮುಂಬಯಿ : ವಿಶ್ವಕಪ್‌ ಫೈನಲ್‌ನಲ್ಲಿ ಆಘಾತಕಾರಿ ಸೋಲು ಅನುಭವಿಸಿರುವ ಭಾರತ ಇದೀಗ ಟಿ೨೦ ಪಂದ್ಯಕ್ಕೆ ರೆಡಿಯಾಗಬೇಕಿದೆ. ನವೆಂಬರ್ 23 ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದ ನಂತರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ಈ ಪಂದ್ಯದ ಮೂಲಕ ಮರಳಲಿದ್ದಾರೆ. ಭಾರತದ ವಿಶ್ವಕಪ್ ಅಭಿಯಾನದ ಭಾಗವಾಗಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರಿತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಸೇರಿದಂತೆ ಕೆಲ ಸ್ಟಾರ್ ಆಟಗಾರರು ವಿಶ್ವಕಪ್ ಅಭಿಯಾನದ ನಂತರ ವಿಶ್ರಾಂತಿ ಪಡೆದಿದ್ದಾರೆ. ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಮೊದಲ ಮೂರು ಟಿ20ಗಳಿಂದ ಹೊರಗುಳಿದಿದ್ದಾರೆ. ರಾಯ್‌ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20 ಪಂದ್ಯಗಳಿಗೆ ಉಪನಾಯಕನಾಗಿ ಅಯ್ಯರ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಪಾದದ ಗಾಯದ ಸಮಸ್ಯೆಯಿಂದಾಗಿ ಸ್ಟಾರ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಗೆ ಗೈರಾಗಿದ್ದಾರೆ. ಇದರ ಜೊತೆಗೆ ಅಚ್ಚರಿ ಎಂಬಂತೆ ಯುಜ್ವೇಂದ್ರ ಚಹಲ್ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಕೂಡ ಆಯ್ಕೆ ಮಾಡಲಾಗಿಲ್ಲ. ಜಿತೇಶ್ ಶರ್ಮಾ ಅವರನ್ನು ನಿಯೋಜಿತ ವಿಕೆಟ್ ಕೀಪರ್-ಬ್ಯಾಟರ್ ಆಗಿ ಮತ್ತು ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ತಂಡದಲ್ಲಿ ತನ್ವೀರ್ ಸಂಘ, ನಾಥನ್ ಎಲ್ಲಿಸ್ ಮತ್ತು ಸ್ಪೆನ್ಸರ್ ಜಾನ್ಸನ್ ಕೂಡ ಇದ್ದಾರೆ.
ಈ ಸರಣಿಯು ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗಿ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ಉಳಿದ ಮೂರು ಪಂದ್ಯಗಳು ನವೆಂಬರ್ 26 ರಂದು ತಿರುವನಂತಪುರದಲ್ಲಿ, ನವೆಂಬರ್ 28 ರಂದು ಗುವಾಹಟಿಯಲ್ಲಿ ಮತ್ತು ಡಿಸೆಂಬರ್ 1 ರಂದು ನಾಗ್ಪುರದಲ್ಲಿ ನಡೆಯಲಿದೆ.

ಭಾರತ : ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಜಂಪಾ, ತನ್ವೀರ್ ಸಂಘ.error: Content is protected !!
Scroll to Top