ಸಿಎಂ-ಡಿಸಿಎಂ ಜಾತಿ ಜಟಾಪಟಿ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸುವ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಮತ್ತೊಂದು ಸುತ್ತಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ವರದಿ ಸ್ವೀಕರಿಸುವುದನ್ನು ಡಿಕೆಶಿ ವಿರೋಧಿಸಿದ್ದರೆ ಸ್ವೀಕರಿಸಿಯೇ ಸಿದ್ದ ಎಂದು ಸಿದ್ದರಾಮಯ್ಯ ಪಟ್ಟುಹಿಡಿದಿದ್ದಾರೆ. ಒಕ್ಕಲಿಗ ಸಮುದಾಯ ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಸದ್ಯ ವರದಿಯ ತಂಟೆಗೆ ಹೋಗುವುದು ಬೇಡ ಎಂಬ ನಿಲುವು ತಾಳಿದ್ದಾರೆ. ಆದರೆ ಲೋಕಸಭೆ ಚುನಾವಣೆಗಾಗುವಾಗ ಜನರನ್ನು ಸೆಳೆಯಲು ಏನಾದರೊಂದು ವಿಚಾರ ಇರಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ವರದಿಯ ಪರವಾಗಿದ್ದಾರೆ.
ಜಾತಿ ಗಣತಿ ವರದಿ ಸ್ವೀಕರಿಸಿ ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿ ವಿಚಾರ ಸಿದ್ದರಾಮಯ್ಯ ಹಾಗೂ ಡಿ ಡಿ.ಕೆ. ಶಿವಕುಮಾರ್‌ ನಡುವೆ ನೇರ ಸಂಘರ್ಷಕ್ಕೆ ಕಾರಣವಾಗಿದೆ.
ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಕೆಶಿ ಸಹಿ ಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ ಮತ್ತು ರಾಹುಲ್‌ ಗಾಂಧಿ ಅವರ ನಿಲುವಿಗೆ ನನ್ನ ಸಂಪೂರ್ಣ ಸಹಮತ ಇದೆ ಎಂದು ಹೇಳುವ ಮೂಲಕ ಡಿಕೆಶಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ದಾಳ ಉರುಳಿಸಿದ್ದಾರೆ.
ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ.







































































































































error: Content is protected !!
Scroll to Top