ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ಹಾಗೂ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕಿಯರ ತಂಡವನ್ನು ಪ್ರಥಮ ವಿಜ್ಞಾನ ವಿಭಾಗದ ಕಿಯೋರ ಪಾಯಸ್, ಅಲ್ವೀನಿಯಾ ಡೆಸ ಹಾಗೂ ಪೂರ್ವಿಕ ಪ್ರತಿನಿಧಿಸಿದ್ದು, ಇವರಲ್ಲಿ ಕಿಯೋರ ಪಾಯಸ್ ಮತ್ತು ಅಲ್ವೀನಿಯಾ ಡೆಸ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ತಂಡವನ್ನು ದ್ವಿತೀಯ ವಿಜ್ಞಾನ ವಿಭಾಗದ ವಿಜೇಶ್ ದೇವಡಿಗ, ಶ್ರವಣ್ ಬಿ., ಪ್ರಥಮ ವಾಣಿಜ್ಯ ವಿಭಾಗದ ಅನ್ಶ್ ಕುಮಾರ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ರಿಶೋನ್ ಸೆಬಾಸ್ಟಿಯನ್ ಪಿಂಟೊ ಪ್ರತಿನಿಧಿಸಿದ್ದು ಇವರಲ್ಲಿ ವಿಜೇಶ್ ದೇವಾಡಿಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಮುಂದೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

































































