ಬೆಂಗಳೂರು : ರಾಜ್ಯ ಸರಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮತ್ತು ಸದಸ್ಯರ ಅಧಿಕಾರಾವಧಿಯನ್ನು ಜ. 31ರ ವರೆಗೆ ವಿಸ್ತರಿಸಿದೆ.
ಜಾತಿ ಗಣತಿ ವರದಿ ಪ್ರಕಟ ಕುರಿತಂತೆ ಭಾರಿ ಗೊಂದಲ, ವಿವಾದ ಸೃಷ್ಟಿಯಾಗುತ್ತಿದ್ದು ಇದೇ ಸಂದರ್ಭದಲ್ಲಿ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯನ್ನು 2 ತಿಂಗಳು ವಿಸ್ತರಣೆ ಮಾಡುವ ಮಹತ್ವದ ನಿರ್ಧಾರಕ್ಕೆ ಸರಕಾರ ಮುಂದಾಗಿದೆ. ವಿಸ್ತರಣೆಯಾಗದೇ ಇರುತ್ತಿದ್ದಲ್ಲಿ 2023ರ ನ. 26ಕ್ಕೆ ಇವರ ಅಧಿಕಾರಾವಧಿ ಮುಕ್ತಾಯವಾಗುತ್ತಿತ್ತು.
ಸಿಎಂಗೆ ಪತ್ರ
ನ. 22ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಪ್ರಸ್ತುತ ಆಯೋಗವು 2015ರ ಸಾಮಾಜಿಕ, ಶೈಕ್ಷಣಿಕ ವರದಿಯನ್ನು ತಯಾರಿಸುವ ಪ್ರಕ್ರಿಯೆಯಲ್ಲಿದೆ. ವರದಿಯನ್ನು ಪೂರ್ಣಗೊಳಿಸಿ ಸರಕಾರಕ್ಕೆ ನೀಡಲು ಕಾಲಾವಕಾಶ ಬೇಕಿದೆ. ಹೀಗಾಗಿ ಪ್ರಸ್ತುತ ಆಯೋಗವನ್ನು ಮುಂದುವರಿಸಬೇಕು ಎಂದು ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.







































































