ಪ್ರಶಸ್ತಿ ಶಂಕರನಾಗ್ಗೆ ಅರ್ಪಣೆ
ಪಣಜಿ : ಗೋವಾದಲ್ಲಿ ನಡೆಯುತ್ತಿರುವ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕಾಂತಾರ ಚಿತ್ರ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.
70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.
ಸದ್ಯ ‘ಕಾಂತಾರ’ ಚಾಪ್ಟರ್ 1 ಫಸ್ಟ್ ಲುಕ್ ಬಿಡಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದರ ಬೆನ್ನಿಗೆ ಕಾಂತಾರ ಚಿತ್ರ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಪ್ರಶಸ್ತಿಯನ್ನು ಚಿತ್ರದ ನಿರ್ದೇಶಕ, ನಟ ರಿಷಬ್ ಶೆಟ್ಟೆ ಶಂಕರನಾಗ್ಗೆ ಅರ್ಪಿಸಿದ್ದಾರೆ.









































