ಕಾರ್ಕಳ : ಬಸ್ – ಕಾರು ನಡುವೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಡಿ. 11ರ ಮಧ್ಯಾಹ್ನ ಸಂಭವಿಸಿದೆ.
ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.


































