ಲಂಚ ಆರೋಪ : ಕೋಟ ಠಾಣೆ ಉಪನಿರೀಕ್ಷಕ ಅಮಾನತು

ಕಾರ್ಕಳ : ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಉಪನಿರೀಕ್ಷಕ, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಉಪನಿರೀಕ್ಷಕ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಅಧ್ಯಕ್ಷತೆ ವಿಚಾರಕ್ಕೆ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಎಂಬವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ಧ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ಧದ ದೂರಿಗೆ ಬಿ. ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭುಲಿಂಗಯ್ಯ ಲಂಚ ಪಡೆದಿದ್ದರು. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ದಿನೇಶ್ ಗಾಣಿಗ ವೀಡಿಯೋ ಮೂಲಕ ಎಸ್‌ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಸದ್ಯ ಆರೋಪಿತರಾದ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ.







































































error: Content is protected !!
Scroll to Top