ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಡಿ. 14 ರಂದು ಬೆಂಗಳೂರಿನಲ್ಲಿ ಹೊಸೂರು ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೃತಿ ಕೆರ್ವಾಶೆಯ ಶೇಖರ ಮತ್ತು ಶಶಿಕಲಾ ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.































































error: Content is protected !!
Scroll to Top