ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

ಮೈಸೂರು : ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ನೀಡಿದ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು‌ ಪ್ರತಾಪ್​ ಸಿಂಹ ಹೇಳಿಕೆ ನೀಡಿದ್ದರು. ಕಾಂಗ್ರೆಸ್​ ಕಾರ್ಯಕರ್ತರು ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದರು.
ಪ್ರತಾಪ್​ ಸಿಂಹ ಹಿಂದು ಮತ್ತು ಮುಸ್ಲಿಂಮರ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್​ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ಲಿಖಿತ ದೂರು ನೀಡಿದ್ದರು.

ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರತಾಪ್‌ ಸಿಂಹ ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ನನ್ನನ್ನು ಭಯೋತ್ಪಾದಕ ಅಂತ ಬಿಂಬಿಸುವ ಪ್ರಯತ್ನ ಕಾಂಗ್ರೆಸಿಗರು ಮಾಡಿದರು. ಮುಸ್ಲಿಮರೆಲ್ಲ ಭಯೋತ್ಪಾದಕರು ಅನ್ನೋ ರೀತಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ಸಂಸತ್ ವಿಚಾರದಲ್ಲಿ ನಾನು ಸ್ಪಷ್ಟನೆ ಕೊಟ್ಟ ಬೆನ್ನಲ್ಲೆ ಪ್ರತಾಪ್ ಸಿಂಹ ಸಹೋದರ ಮರಗಳ್ಳ ಎಂದು ಕಾಂಗ್ರೆಸ್‌ನವರು ಪೋಸ್ಟ್ ಮಾಡಿದ್ದರು ಎಂದು ಟೀಕಿಸಿದ್ದಾರೆ.































































































error: Content is protected !!
Scroll to Top