ದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೆ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಲಾಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ. ತ್ಯಾಗಿ ತಿಳಿಸಿದ್ದಾರೆ.
ಮಾಹಿತಿ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನಲೆ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅಧ್ಯಕ್ಷರಾಗಿ ಲಾಲನ್ ಸಿಂಗ್ ಅವರ ಎರಡು ವರ್ಷಗಳ ಅವಧಿಯೂ ಪೂರ್ಣಗೊಂಡಿದೆ. ಇದೀಗ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಅನುಮೋದಿಸಲಾಗಿದೆ.

ನಿತೀಶ್ ಕುಮಾರ್ 2003 ರಿಂದ ಜನತಾ ದಳ ಯುನೈಟೆಡ್ ನ ಐದನೇ ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ. ಮೊದಲನೆಯದಾಗಿ, ಶರದ್ ಯಾದವ್ 2016 ರವರೆಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಆ ನಂತರ ನಿತೀಶ್ ಕುಮಾರ್ ರಾಷ್ಟ್ರೀಯ ಅಧ್ಯಕ್ಷರಾದರು. ನಿತೀಶ್ ಕುಮಾರ್ ನಂತರ ಆರ್ ಸಿಪಿ ಸಿಂಗ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ. ನಂತರ ಆರ್ಸಿಪಿ ಸಿಂಗ್ ನಂತರ ಲಲನ್ ಸಿಂಗ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಇದೀಗ ನಿತೀಶ್ ಕುಮಾರ್ ಎರಡನೇ ಬಾರಿಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ.






























































