ಕಾರ್ಕಳ : ಡಾ. ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ – 2023 ಮತ್ತು 1996-1998ರ ಅವಧಿಯಲ್ಲಿ ಶಿಕ್ಷಣ ಪೂರೈಸಿರುವ ಸಂಸ್ಥೆಯ ವಿದ್ಯಾರ್ಥಿಗಳ ಬೆಳ್ಳಿ ಪುನರ್ಮಿಲನ ಕಾರ್ಯಕ್ರಮ ಡಿ. 30 ರಂದು ಜಸ್ಟೀಸ್ ಕೆ. ಎಸ್. ಹೆಗ್ಡೆ ಉದ್ಯಮಾಡಳಿತ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ.ಎಂ.ಎಸ್. ಮೂಡಿತ್ತಾಯ ಹಾಗೂ ನಿಟ್ಟೆ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ, ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಚಾನ್ಸೆಲರ್ ಎನ್. ವಿನಯ ಹೆಗ್ಡೆ ಉಪಸ್ಥಿತರಿರಲಿದ್ದಾರೆ. ಸಂಸ್ಥೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿರುವ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿಶ್ವದೆಲ್ಲೆಡೆ ನೆಲೆಸಿರುವ ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದ ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಡಾ. ವೀಣಾ ಬಿ.ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.






























































