ಕಾರ್ಕಳ : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಬೆಂಗಳೂರು ಇದರ ವತಿಯಿಂದ ವರ್ಷಂಪ್ರತಿಯಂತೆ ನೀಡುವ ವಿಧವಾ ವೇತನ, ಅಂಗವಿಕಲ ವೇತನ, ವೃದ್ಧಾಪ್ಯ ವೇತನ ಮತ್ತು 5ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಅರ್ಜಿ ಫಾರಂಗಳ ವಿತರಣೆ ಜ.7 ರಂದು ಬೆಳಗ್ಗೆ 10ಕ್ಕೆ ಕಾರ್ಕಳದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ನ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಕೆ. ಬಿ. ಕೀರ್ತನ್ ಕುಮಾರ್ ಮತ್ತು ಕಾರ್ಯದರ್ಶಿ ಹರೀಶ್ ರಾವ್ ಅಸ್ವಾಲ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9900513341 ಅಥವಾ 9448843643 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಬಹುದು.































