ರಿಕ್ಷಾ ಚಾಲಕನಿಗೆ ಹೃದಯಾಘಾತ : ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಉಡುಪಿ: ಚಲಿಸುತ್ತಿದ್ದ ಆಟೋರಿಕ್ಷಾದ ಚಾಲಕನಿಗೆ ಹೃದಯಾಘಾತವಾಗಿ ಆಟೋ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ರಿಕ್ಷಾದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಡುಬೆಟ್ಟುವಿನ ಸುರೇಶ್ ಅವರು ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಅಜ್ಜರಕಾಡುನಿಂದ ಉಡುಪಿ ಬಸ್ ನಿಲ್ದಾಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ. ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಚಲಿಸಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆಯಿತು.
ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೋರ್ವ ರಿಕ್ಷಾ ಚಾಲಕ ಮತ್ತು ಇತರರು ತಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

















































error: Content is protected !!
Scroll to Top