439 ಕೋ. ರೂ. ಸಾಲ ಮರುಪಾವತಿ ಬಾಕಿ : ರಮೇಶ್‌ ಜಾರಕಿಹೊಳಿ ವಿರುದ್ಧ ದೂರು

ಬೆಂಗಳೂರು: ಸಾಲ ಮರುಪಾವತಿಸದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಗೋಕಾಕ್ ಶಾಸಕ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ​ ದಾಖಲಾಗಿದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ ಪಡೆದು ಮರುಪಾವತಿಸದೆ ಮೋಸ ಮಾಡಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾ​​​ಕ್​​ ಫಾಲ್ಸ್​​ ರಸ್ತೆಯ ಸೌಭಾಗ್ಯ ಲಕ್ಷ್ಮಿ ಶುಗರ್ಸ್​​ ಲಿಮಿಟೆಡ್​​​ ಕಂಪನಿಯ ಅಧ್ಯಕ್ಷ ರಮೇಶ್​ ಜಾರಕಿಹೊಳಿ, ನಿರ್ದೇಶಕ ವಸಂತ್​ ವಿ. ಪಾಟೀಲ್​ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಂಕರ್​ ಎ. ಪಾವಡೆ ಕಾರ್ಖಾನೆ ಸ್ಥಾಪನೆ, ವಿಸ್ತರಣೆ ಮತ್ತು ನಿರ್ವಹಣೆಯ ಹಣಕ್ಕಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ ನಿಯಮಿತ ಕೇಂದ್ರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ಮತ್ತು ಇದರ ಸಮೂಹ ಬ್ಯಾಂಕ್​ಗಳಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ತುಮಕೂರು ಜಿಲಾ ಕೇಂದ್ರ ಸಹಕಾರ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಉತ್ತರ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಿಂದ 2013ರ ಡಿಸೆಂಬರ್​​ 7ರಿಂದ 2017ರ ಮಾರ್ಚ್​ 31ರ ವರೆಗೆ ಹಂತ ಹಂತವಾಗಿ 232.88 ಕೋಟಿ ರೂ. ಸಾಲ ಮಂಜೂರಾಗಿತ್ತು. ಆ ಸಾಲವನ್ನು ಪಡೆದ ಆರೋಪಿಗಳು ಮರುಪಾವತಿ ಮಾಡದೆ ಇದ್ದ ಕಾರಣ 2023ರ ಆಗಸ್ಟ್‌ 31ಕ್ಕೆ 439.07 ಕೋಟಿ ರೂ. ಸಾಲ ಬಾಕಿ ಉಳಿದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.















































\















error: Content is protected !!
Scroll to Top