ಸ್ಕೂಟಿಗೆ ಬಸ್‌ ಡಿಕ್ಕಿ : ಯುವಕ ಸಾವು

ಪಡುಬಿದ್ರಿ: ಪಡುಬಿದ್ರಿ ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸ್ಖೂಟಿ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಭಾನುವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದ ಪಲಿಮಾರು ದರ್ಕಾಸ್ತು ನಿವಾಸಿ ಧನ್‌ರಾಜ್ ಪಲಿಮಾರು(17) ಮೃತಪಟ್ಟಿರುವ ಯುವಕ. ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ.
ಸಹಸವಾರರಾಗಿದ್ದ ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ನಜ್ಜುಗುಜ್ಜಾಗಿದೆ.

































































error: Content is protected !!
Scroll to Top