ಯಶ್‌ ಕಟೌಟ್‌ ಕಟ್ಟುವಾಗ ವಿದ್ಯುತ್‌ ಪ್ರವಹಿಸಿ ಮೂವರು ಸಾವು

ಗದಗ: ಕನ್ನಡದ ಜನಪ್ರಿಯ ನಟ ಯಶ್ ಹುಟ್ಟು ಹಬ್ಬಕ್ಕೆ ಶುಭ ಕೋರುವ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹನುಮಂತ ಹರಿಜನ್, ಮುರಳಿ ನಡವಿನಮನಿ ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ. ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ.































































































































error: Content is protected !!
Scroll to Top