ರಾಜ್ಯದಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ – ಒಂದು ಸಾವು

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ರಾಜ್ಯದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

































































































error: Content is protected !!
Scroll to Top