ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೇಂದ್ರ ತನಿಖಾ ಸಂಸ್ಥೆ ಇಡಿ ವಿಚಾರಣೆಗೆ ಕರೆದಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆ (ಜೆಕೆಸಿಎ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ಸಮನ್ಸ್ ಕಳುಹಿಸಿದೆ. ಜೆಕೆಸಿಎಯಲ್ಲಿ ಆಪಾದಿತ ಹಣಕಾಸು ಅಕ್ರಮಗಳ ಬಗ್ಗೆ ಇಡಿ 2022ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣ : ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್
























