ಕಾರ್ಕಳ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಉಪ ನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಜ. 10ರಂದು ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಆದಿತ್ಯ ಎನ್. ನಾಯಕ್ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಶುಭಹಾರೈಸಿದ್ದಾರೆ.
ಚಿತ್ರಕಲೆ ಸ್ಪರ್ಧೆ : ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ




























