ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದಲ್ಲಿ ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ನಿರ್ಮಿಸಿರುವ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರಸ್ತುತ ರಾಮಲಲ್ಲಾ ವಿಗ್ರಹವನ್ನು ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು ಎಂದಿದ್ದಾರೆ.
ಮುಹೂರ್ತವನ್ನು ವಾರಣಾಸಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ನಿರ್ಧರಿಸಿದ್ದಾರೆ ಎಂದು ರಾಯ್ ಹೇಳಿದರು. ಧಾರ್ಮಿಕ ವಿಧಿವಿಧಾನಗಳು ಜ.16ರಿಂದ ಆರಂಭವಾಗಲಿದ್ದು, ಜ.21ರವರೆಗೆ ನಡೆಯಲಿದೆ ಜ.22ರಂದು ‘ಪ್ರಾಣ ಪ್ರತಿಷ್ಠಾ’ ಸಮಾರಂಭ ನಡೆಯಲಿದೆ. ‘ಪ್ರಾಣ ಪ್ರತಿಷ್ಠಾ’ ಮಾಡಲಿರುವ ವಿಗ್ರಹವು ಸುಮಾರು 150-200 ಕೆ.ಜಿ. ಜನವರಿ 18 ರಂದು, ವಿಗ್ರಹವನ್ನು ದೇವಾಲಯದ ‘ಗರ್ಭ ಗೃಹ’ದಲ್ಲಿ ಅದರ ಸ್ಥಾನದಲ್ಲಿ ಇರಿಸಲಾಗುತ್ತದೆ.
ಪ್ರಾಣ ಪ್ರತಿಷ್ಠಾ ಪೂರ್ವ ಸಂಸ್ಕಾರಗಳ ಔಪಚಾರಿಕ ಪ್ರಕ್ರಿಯೆಗಳು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಜನವರಿ 21 ರವರೆಗೆ ನಡೆಯಲಿದೆ ಎಂದು ಅವರು ಹೇಳಿದರು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಜನವರಿ 22 ರಂದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ. “ಜನವರಿ 20 ಮತ್ತು 21 ರಂದು ಸಾರ್ವಜನಿಕರಿಗೆ ದರ್ಶನವನ್ನು ಮುಚ್ಚಲಾಗುವುದು” ಎಂದು ಅವರು ಹೇಳಿದರು.

ದೇಶದ ಮೂವರು ಪ್ರಮುಖ ಶಿಲ್ಪಿಗಳಾದ ಮೈಸೂರಿನ ಅರುಣ್ ಯೋಗಿರಾಜ್, ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರಿಗೆ ರಾಮಲಲ್ಲಾ ಮೂರ್ತಿಯನ್ನು ತಯಾರಿಸುವ ಜವಾಬ್ದಾರಿಯನ್ನು ವಹಿಸಲಾಗಿತ್ತು. ಮೂವರೂ ಶಿಲ್ಪಿಗಳು ತಮ್ಮ ಕಲ್ಪನೆಯ ರಾಮ ಲಲ್ಲಾನ ಮೂರ್ತಿಯನ್ನು ನಿರ್ಮಿಸಿ ಸಮರ್ಪಿಸಿದ್ದಾರೆ. ಇವುಗಳ ಪೈಕಿ ಕನ್ನಡಿಗ ಅರುಣ್ ಯೋಗಿರಾಜ್ ಅವರು ಮೂರ್ತಿ ಆಯ್ಕೆಯಾಗಿದೆ.































