ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ : ಉಡುಪಿ – ಕಿಶೋರ್‌ ಕುಂದಾಪುರ : ದ.ಕ. – ಸತೀಶ್‌ ಕುಂಪಲ

ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಹಾಗೂ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್‌ ಕುಂಪಲ ಆಯ್ಕೆಯಾಗಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ನೂತನ ಜಿಲ್ಲಾಧ್ಯಕ್ಷರ ಹೆಸರನ್ನು ಪ್ರಕಟಿಸಿದ್ದಾರೆ. ಕಿಶೋರ್ ಕುಮಾರ್ ಅವರು 2013ರಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕುಂದಾಪುರ ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸತೀಶ್ ಸ್ಪರ್ಧಿಸಿದ್ದರು.
‌
ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್‌ ಕುಂಪಲ ನೇಮಕಗೊಂಡಿದ್ದಾರೆ. ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾ ಪಂಚಾಯತ್‌ನಲ್ಲಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಬಾರಿ ಚುನಾವಣೆಯಲ್ಲಿ ಯು.ಟಿ. ಖಾದರ್‌ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕಿಳಿದಿದ್ದರು. 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆದೇಶ ಹೊರಡಿಸಿರುತ್ತಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ನೇಮಕಗೊಂಡಿದ್ದರೆ, ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ ಅವರನ್ನು ನೇಮಕ ಮಾಡಲಾಗಿದೆ.











































































error: Content is protected !!
Scroll to Top