ಗ್ಯಾಸ್‌ ಸಿಲಿಂಡರ್‌ ಸ್ಫೋಟ : 8 ಮಂದಿಗೆ ಗಾಯ

ಬೆಂಗಳೂರು: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬೆಂಗಳೂರಿನ ಯಲಹಂಕದ ಎಲ್‌ಬಿಎಸ್‌ನಲ್ಲಿ ನಡೆದಿದೆ.
ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರತೆಗೆ ಮನೆಯ ಗೋಡೆ ಛಿದ್ರವಾಗಿದೆ. ಪಕ್ಕದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಕಿಟಕಿಗಳು, ಬಾಗಿಲುಗಳು ಮುರಿದಿವೆ. ಮನೆಯಲ್ಲಿನ ವಿದ್ಯುತ್ ಮೀಟರ್ ಬಾಕ್ಸ್‌ಗಳಿಗೂ ಹಾನಿಯಾಗಿದೆ.
ವಿದ್ಯುತ್ ಕೇಬಲ್‌ಗಳಿಗೂ ಹಾನಿಯಾಗಿದ್ದು, ತಕ್ಷಣಕ್ಕೆ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಗಳು ಶೇಕ್ ಆಗಿವೆ. ಮನೆಯವರು ಬಾಂಬ್‌ ಸ್ಫೋಟಿಸಿದ ಅನುಭವವಾಯಿತು ಎಂದು ಹೇಳಿಕೊಂಡಿದ್ದಾರೆ.

































































error: Content is protected !!
Scroll to Top