ಜ. 21-23 : ಶ್ರೀ ಕ್ಷೇತ್ರ ಕುಂದೇಶ್ವರ – ವರ್ಷಾವಧಿ ಜಾತ್ರೋತ್ಸವ

ಕಾರ್ಕಳ : ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ. 21ರಿಂದ 24ರವರೆಗೆ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮ
ಜ. 21ರಂದು ಬೆಳಗ್ಗೆ 10.30ರಿಂದ ಪ್ರಾರ್ಥನೆ, ತೋರಣ ಮುಹೂರ್ತ ಗಣಯಾಗ, ಮಹಾಪೂಜೆ, ಸಾಯಂಕಾಲ 7 ಗಂಟೆಗೆ ಆರಾಧನ ಪೂಜೆ ನಡೆಯಲಿದೆ.
ಜ. 22 ರಂದು ಬೆಳಗ್ಗೆ 8 ಗಂಟೆಗೆ ಪಂಚವಿಂಶತಿ ಕಲಾಧಿವಾಸ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಧ್ವಜಾರೋಹಣ, ಅವಸ್ತುತ ಬಲಿ, ಪಲ್ಲಪೂಜೆ ನಡೆಯಲಿದ್ದು, ಸಂಜೆ 6.30ರಿಂದ ಮಹೋತ್ಸವ, ಉತ್ಸವ ಬಲಿ, ಅವಭೃತ ಕಟ್ಟೆಪೂಜೆ, ದೈವ ಭೇಟಿ, ಅಗ್ನಿಕೇಳಿ, ರಂಗಪೂಜೆಯಾಗಿ ಧ್ವಜಾವರೋಣವಾಗಲಿದೆ.
ಜ. 23ರಂದು ನವಕಪ್ರಧಾನ ಹೋಮ, ಸಂಪ್ರೋಕ್ಷಣೆ ಹಾಗೂ ಪ್ರಸಾದ ವಿತರಣೆ

ಸಾಂಸ್ಕೃತಿಕ ಕಾರ್ಯಕ್ರಮ
ಜ. 21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ.

ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ
ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್‌ ಶೆಟ್ಟಿ ಪಡ್ರೆ ಅವರಿಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಶಾಸಕ ವಿ. ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ. ಉಪಸ್ಥಿತರಿರಲಿದ್ದಾರೆ.

ಶಿವರಾತ್ರಿ
ಶ್ರೀ ಕ್ಷೇತ್ರದಲ್ಲಿ ಮಾ. 8 ರಂದು ಮಹಾ ಶಿವರಾತ್ರಿ ಮಹೋತ್ಸವ, ಏಕಾಹ ಭಜನೆ ಹಾಗೂ ಜಾವ ಪೂಜೆ ನಡೆಯಲಿದೆ. ಮಾ. 10 ರಂದು ಮಾರಿ ಗೋಂದ್ಲು ಪೂಜೆ ಹಾಗೂ ಲತ್ತಂಡೆ ಪಂಜುರ್ಲಿ ಕೋಲ ನಡೆಯಲಿದೆ.





































































































































error: Content is protected !!
Scroll to Top