ದೆಹಲಿ : ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ರಾಮಚಂದ್ರನ ಪ್ರತಿಷ್ಠಾಪನೆ ಜನವರಿ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆಯೊಂದು ಹೊರಬಿದ್ದಿದೆ. ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜ. 18 ರಂದು ಹೇಳಿದ್ದಾರೆ.
ಕೇಂದ್ರ ಸರಕಾರದ ಅಧೀನಕ್ಕೆ ಒಳಪಡುವ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ಜ. 22ರಂದು ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ರಾಜಸ್ಥಾನ, ಮಧ್ಯಪ್ರದೇಶ, ಹರ್ಯಾಣ, ಚತ್ತೀಸಘಡ ಸೇರಿದಂತೆ ಕೆಲ ರಾಜ್ಯಗಳು ಸಾರ್ವತ್ರಿಕ ರಜೆ ಘೋಷಿಸಿದೆ. ಇಷ್ಟೇ ಅಲ್ಲ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಹಲವು ರಾಜ್ಯಗಳು ಮದ್ಯ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ.































































