ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್ ಕುಕ್ಕುಂದೂರು – ಮುಂಬೈ ಇದರ 15ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜ. 27ರಂದು ಟಪ್ಪಾಲುಕಟ್ಟೆ ಶ್ರೀ ದುರ್ಗಾದೇವಿ ಅನುದಾನಿತ ಹಿ. ಪ್ರಾ. ಶಾಲೆ ಬಳಿ ಸಮಾಜ ಮಂದಿರದಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ, 9.30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 12ಗಂಟೆಗೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮ
ರಾತ್ರಿ 8 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶಂಕರನಾರಾಯಣ ಭಟ್ ಉದ್ಘಾಟಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ, ಶಿವತಿಕೆರೆ ಬೈಲಡ್ಕ ಬಾಲಾಜಿ ಕ್ಷೇತ್ರದ ಗುರುಸ್ವಾಮಿ ಬಾಲಕೃಷ್ಣ ಹೆಗ್ಡೆ, ಕುಕ್ಕುಂದೂರು ಶ್ರೀ ದುರ್ಗಾದೇವಿ ಅನುದಾನಿತ ಹಿ. ಪ್ರಾ. ಶಾಲೆಯ ಸಂಚಾಲಕ ರಾಜೇಂದ್ರ ಕುಮಾರ್ ಬಳ್ಳಾಲ್, ಮುಂಬೈ ವಚನಾ ಹಾಸ್ಪಿಟಾಲಿಟಿ ಸರ್ವಿಸಸ್‌ನ ನಿರ್ದೇಶಕ ಚಂದ್ರಶೇಖರ್ ಶೆಟ್ಟಿ, ಕುಕ್ಕುಂದೂರು ಶ್ರೀ ದುರ್ಗಾದೇವಿ ಅನುದಾನಿತ ಹಿ. ಪ್ರಾ. ಶಾಲೆಯ ಮಖ್ಯ ಶಿಕ್ಷಕಿ ಸುಜಾತಾ ಎನ್. ರಾಜ್, ಉದ್ಯಮಿ ಕಮಾಲಾಕ್ಷ ನಾಯಕ್, ಕುಕ್ಕುಂದೂರು ಫ್ರೆಂಡ್ಸ್ – ಮುಂಬೈ ಅಧ್ಯಕ್ಷ ರವೀಂದ್ರ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ
ಸಂಜೆ 6.30ರಿಂದ ಭಜನಾ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಸಂಘದ ಸದಸ್ಯರು ಹಾಗೂ ಅತಿಥಿ ಕಲಾವಿದರಿಂದ ಪ್ರಸನ್ನ ಕುಕ್ಕುಂದೂರು ರಚನೆಯ ರಂಗ್ ಪಾಡಂದಿನ ಬದ್ಕ್‌ಡ್ ನಾಟಕದಾಯೆ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ. ಬಳಿಕ ಚಿತ್ರನಟ, ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ರಚಿಸಿ ನಿರ್ದೇಶಿಸಿರುವ ನಮ್ಮ ಕಲಾವಿದೆರ್ ಬೆದ್ರ ತಂಡದವರಿಂದ ತುಳು ಹಾಸ್ಯಮಯ ನಾಟಕ ಬುದ್ದಿ ಬುಡಯೆ ನಾಟಕ ಪ್ರದರ್ಶನಗೊಳ್ಳಲಿದೆ.






























































