ಬೆಳ್ತಂಗಡಿ: ಅಳದಂಗಡಿ ಸಮೀಪದ ಕುಬಲಾಜೆಯ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು.
ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನದಿಯಲ್ಲಿ ಮುಳುಗಿ ಬಾಲಕ ಸಾವು

ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಬಂಟ್ವಾಳದ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ.
ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದಾರೆ ಆದರೂ ಅದಾಗಲೇ ಬಾಲಕ ಮೃತಪಟ್ಟಿದ್ದ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.































































