ಉಡುಪಿ: ರಾಮನ ಪ್ರತಿಷ್ಠಾಪನೆ ದಿನವಾದ ಸೋಮವಾರ ರಾಜ್ಯ ಸರಕಾರ ಸರಕಾರಿ ರಜೆ ಘೋಷಿಸದಿರುವ ಹಿನ ನೆಲೆಯಲ್ಲಿ ರಜೆ ಹಾಕಿ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಉಡಪಿ ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದ್ದಾರೆ.
ವಿದ್ಯಾರ್ಥಿಗಳು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಮಹತ್ವದ ದಿನವಾದ ಜನವರಿ 22ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ ಎಂದು ಶಾಸಕ ಯಶಪಾಲ್ ಎ ಸುವರ್ಣ ಹೇಳಿದ್ದಾರೆ.
ಸಿದ್ದರಾಮಯ್ಯ ಸರಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ. ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜತೆ ನಿಂತು ನ್ಯಾಯ ಒದಗಿಸಲು ನಾನು ಸಿದ್ದ ಎಂದು ಹೇಳಿದ್ದಾರೆ.
ಯಶಪಾಲ್ ಅವರು ಕೆಲವು ದಿನಗಳ ಹಿಂದೆಯೇ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸಲು ಮನವಿ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನೂ ಬರೆದಿದ್ದರು.
ರಜೆ ಹಾಕಿ ರಾಮೋತ್ಸವದಲ್ಲಿ ಪಾಲ್ಗೊಳ್ಳಿ : ವಿದ್ಯಾರ್ಥಿಗಳಿಗೆ ಯಶ್‌ಪಾಲ್ ಸುವರ್ಣ ಕರೆ































