ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ದೆಹಲಿ: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.







































































































































error: Content is protected !!
Scroll to Top