ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು

ಕಾರ್ಕಳ : ಕಾರುಗಳ ನಡುವೆ ಅಪಘಾತ ಉಂಟಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಜ. 25ರ ಸಂಜೆ ಸಂಭವಿಸಿದೆ. ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಕಾರು, ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರಿನ ಬಲ ಬದಿಯ ಡೋರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮರಿಯಾ ಎಂಬವರು ಗಾಯಗೊಂಡಿದ್ದರು. ಗಾಯಾಳು ಮರಿಯ ಫೆರ್ನಾಂಡೀಸ್ (60) ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.







































































error: Content is protected !!
Scroll to Top