ಕ್ರೈಸ್ಟ್‌ಕಿಂಗ್‌ನಲ್ಲಿ 75ನೇ ಗಣರಾಜ್ಯೋತ್ಸವ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಕ್ರೆ ಜೆಬಿ ಕೊಕೊನಟ್ ಇಂಡಸ್ಟ್ರೀಸ್‌ ಮಾಲೀಕ, ಪ್ರಗತಿಪರ ಕೃಷಿಕ ಬೊನಿಪಸ್ ಸಿಕ್ವೇರಾ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.
ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಜೈನ್ ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಘವಿ ಗಣರಾಜ್ಯೋತ್ಸವ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಸಂಸ್ಥೆಯ ಪದವಿ ಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪದವಿಪೂರ್ವ ವಿಭಾಗದ ಬಾಲಕೃಷ್ಣ ಶೆಟ್ಟಿ ಹಾಗೂ ಪ್ರೌಢಶಾಲಾ ವಿಭಾಗದ ಹೇಮಲತಾ ಈ ಸಂದರ್ಭ ಉಪಸ್ಥಿತರಿದ್ದರು. ಶಿಕ್ಷಕಿಯರಾದ ನೀತಿ ಆಚಾರ್ಯ ಸ್ವಾಗತಿಸಿ, ರಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಕೀಲಾ ವಂದಿಸಿದರು.





























































































































error: Content is protected !!
Scroll to Top