ನ್ಯೂ ವೈಬ್ರಂಟ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಮೂಡುಬಿದಿರೆ : ಕಲ್ಲಬೆಟ್ಟು ನ್ಯೂ ವೈಬ್ರಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ. ಎಂ. ದಯಾಕರ್ ದ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಉತ್ತಮ ವ್ಯಕ್ತಿತ್ವ ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಭವ್ಯ ಭಾರತವನ್ನು ಕಟ್ಟುವ ಅಮೃತ ಕಾಲದಲ್ಲಿ ನಾವಿದ್ದೇವೆ. ಯುವ ಪೀಳಿಗೆಗೆ ಈ ಕಾಲವು ವಿವಿಧ ನವೀಕೃತ ತಂತ್ರಜ್ಞಾನಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸುತ್ತಿದೆ. ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಸತ್ಪ್ರಜೆಗಳಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿ ಚಂದ್ರಶೇಖರ ರಾಜೇ ಅರಸ್ ಮಾತನಾಡಿ, ನಮ್ಮ ರಾಷ್ಟ್ರದ ನಾಯಕರ ನಿರಂತರ ಹೋರಾಟದ ಫಲವಾಗಿ ನಾವು ಪಡೆದ ಸ್ವಾತಂತ್ರ್ಯವನ್ನು, ಗಣರಾಜ್ಯವನ್ನು ಹಾಗೂ ಸಂವಿಧಾನವನ್ನು ಗೌರವಿಸುವುದು ನಮ್ಮ ಕರ್ತವ್ಯ. ಹಾಗಾದಲ್ಲಿ ಮಾತ್ರ ನಾವು ಉತ್ತಮ ನಾಗರೀಕ ಸಮಾಜ ಹೊಂದಲು ಸಾಧ್ಯ ಎಂದರು.

ಪ್ರಶಸ್ತಿ ಪತ್ರದ ವಿತರಣೆ
ಇದೇ ಸಂದರ್ಭ ಭಾರತೀಯ ಅಂಚೆ ಇಲಾಖೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಆಂಗ್ಲ ವಿಭಾಗದ ಮುಖ್ಯಸ್ಥ ಹರೀಶ್ ನಂಬಿಯಾರ್ ಕಾರ್ಯಕ್ರಮ ನಿರ್ವಹಿಸಿದರು.

ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ಟ್ರಸ್ಟಿಗಳಾದ ಯೋಗೇಶ್ ಬೆಡೇಕರ್, ಸುಭಾಷ್ ಜಾ, ಎಸ್. ಮೆಹಬೂಬ ಬಾಷಾ, ಶರತ್ ಗೋರೆ ರವರು ಉಪಸ್ಥಿತರಿದ್ದರು. ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ ಎಸ್.ಎನ್ .ವೆಂಕಟೇಶ್ ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಪಿ. ಎಸ್. ನಿತಿನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅಪರ್ಣಾ ವಂದಿಸಿದರು.





























































































































error: Content is protected !!
Scroll to Top