ಬೈಕ್‌ಗೆ ಟಿಪ್ಪರ್‌ ಡಿಕ್ಕಿ – ಸವಾರರಿಗೆ ಗಾಯ

ಕಾರ್ಕಳ : ಬೈಕ್‌ಗೆ ಟಿಪ್ಪರ್‌ ಡಿಕ್ಕಿ ಹೊಡೆದ ಸವಾರರಿಬ್ಬರು ಗಾಯಗೊಂಡ ಘಟನೆ ಜ. 26ರಂದು ಮುಂಡ್ಕೂರಿನಲ್ಲಿ ಸಂಭವಿಸಿದೆ. ಬೆಳ್ಮಣ್‌ ಕಡೆಯಿಂದ ಮುಂಡ್ಕೂರು ಕಡೆಗೆ ಬರುತ್ತಿದ್ದ ಟಿಪ್ಪರ್ ಇಂದಿರಾ ನಗರ ಗರಡಿ ಎಂಬಲ್ಲಿ ಹಾದು ಹೋಗಿರುವ ಅತ್ರಾಡಿ – ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ, ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆಗೆ ಅಶ್ವಿನ್‌ ಎಂಬುವವರು ಆದೇಶ್‌ ಎಂಬುವವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸವಾರಿಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.





























































































































error: Content is protected !!
Scroll to Top