ಸಮುದಾಯದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ – ಜಯಪ್ರಕಾಶ್ ಹೆಗ್ಡೆ
ಹೆಬ್ರಿ : ಸಮುದಾಯದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮುಂದುವರಿದ ಬಂಟರು ತಮ್ಮೊಂದಿಗೆ ಹಿಂದುಳಿದವರನ್ನು ಮುನ್ನಡೆಸುವ ಕೆಲಸ ಮಾಡಿದಾಗ ಸಮುದಾಯದ ಸರ್ವೋತೋಮುಖ ಬೆಳವಣಿಗೆಯಾಗುತ್ತದೆ. ಬಂಟ ಸಮಾಜ ನಾಯಕತ್ವದ ವಿಚಾರದಲ್ಲಿ ಮುಂದಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳನ್ನು ಸಮುದಾಯದಿಂದ ನಿರಂತರವಾಗಿ ನಡೆಯಲಿ. ಮನೆಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ ಕೊಡುವ ಕೆಲಸ ತಾಯಂದಿರು ಮಾಡಬೇಕು. ಅಂತೆಯೆ ತಮ್ಮ ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮತ್ತು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಹಿರಿದು ಎಂದು ಹಿಂದುಳಿದ ಆಯೋಗಗಳ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಜ. 28ರಂದು ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ನಡೆದ ಬಂಟರ ವಾರ್ಷಿಕ ಸಮಾವೇಶ ಹಾಗು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ವೇತನ ವಿತರಣೆ
ಬಂಟರ ಸಂಘ ಬೆಂಗಳೂರು ಹಾಗೂ ಮಂಗಳೂರು ವತಿಯಿಂದ ಕೊಡಮಾಡಿದ ಸಹಾಯಧನ ಸೇರಿದಂತೆ ಹೆಬ್ರಿ ಎಸ್ಆರ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಕೊಡಮಾಡಿದ ವಿದ್ಯಾರ್ಥಿ ವೆೇತನ ಸೇರಿದಂತೆ ಒಟ್ಟು 1. 80 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಹೆಬ್ರಿ ಅಜೆಕಾರು ವಲಯದ ಸಮುದಾಯದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಇದೇ ಸಂದರ್ಭ ಬಂಟರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾವೇಶದ ಸಂಚಾಲಕ ಮುಟ್ಲುಪಾಡಿ ಸತೀಶ್ ಶೆಟ್ಟಿ, ಸುಮಾರು 40ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹೆಬ್ರಿ ಅಜೆಕಾರು ವಲಯ ಬಂಟರ ಸಂಘ ಸಮುದಾಯ ಅಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಜನತೆಯ ಒಗ್ಗಟ್ಟಿನಲ್ಲಿ ಸಮುದಾಯದ ಅಭಿವೃದ್ಧಿ ಅಡಗಿದೆ. ಈ ನಿಟ್ಟಿನಲ್ಲಿ ಮುಂದೆಯೂ ಸಂಘಟಿತರಾಗಿ ಕಾರ್ಯನಿರ್ವಹಿಸೋಣ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘದ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ ಮಾತನಾಡಿ, ಸಂಘದ ಎಲ್ಲಾ ಪದಾಧಿಕಾರಿಗಳ ಪರಿಶ್ರಮ ಹಾಗೂ ಸಮಾಜ ಭಾಂದವರ ಸಹಕಾರದಿಂದ ಸಮ್ಮೆಳನ ಯಶಸ್ವಿಯಾಗಿದೆ ಎಂದರು.
ಸಮಾರಂಭದಲ್ಲಿ ಉದ್ಯಮಿ ವಿ. ಜಿ. ಶೆಟ್ಟಿ, ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕಿ ನಮಿತಾ ಉದಯ ಕುಮಾರ್ ಶೆಟ್ಟಿ, ಸಮಾವೇಶ ಸಮಿತಿಯ ಸಂಚಾಲಕಿ ಆಶಾಲತಾ ಬಿ. ಶೆಟ್ಟಿ ಮುಟ್ಲುಪಾಡಿ, ಉಪಾಧ್ಯಕ್ಷರಾದ ವಾದಿರಾಜ್ ಶೆಟ್ಟಿ, ಹರ್ಷ ಶೆಟ್ಟಿ, ಕುಂಟಿನಿ ಭಾಸ್ಕರ್ ಶೆಟ್ಟಿ, ದಯಾನಂದ ಶೆಟ್ಟಿ, ಸುರೇಶ್ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಬಾನು ಪಿ. ಬಲ್ಲಾಳ್, ಮಾತೃ ಸಂಘದ ನಿರ್ದೇಶಕರಾದ ಭೂತುಗುಂಡಿ ಕರುಣಾಕರ ಶೆಟ್ಟಿ, ಪ್ರಮೋದ್ ಆರ್. ಶೆಟ್ಟಿ, ಎಸ್ಆರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ, ಜ್ಯೋತಿ ಕೆ. ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ, ಸಂಪತ್ ಶೆಟ್ಟಿ, ಸೂರಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಕೆ. ಅಡ್ಯಂತಾಯ ಸ್ವಾಗತಿಸಿ, ಸಹ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಹಾಗೂ ಸಾಂಸ್ಕೃತಿಕ ಸಮಿತಿಯ ದೀಪಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ
ಬೆಳಿಗ್ಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಲ್ಲಿಕಾ ಸುಮಂತ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಸಾಮಾಜಿಕ ಬದುಕಿನಲ್ಲಿ ಬಂಟರ ಪಾತ್ರ ಕುರಿತು ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಮಾತನಾಡಿದರು. ಉದ್ಯಮಿ ಹರೀಶ್ ಮೊದಲಾದವರು ಭಾಗವಹಿಸಿದ್ದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಉದಯಕುಮಾರ್, ಶಕುಂತಲಾ ಬಲ್ಲಾಳ್, ಪ್ರವೀಣ್ ಶೆಟ್ಟಿ, ಸೋನಿ ಪಿ. ಶೆಟ್ಟಿ, ರಾಜೇಶ್ವರಿ ಪಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಸಮುದಾಯದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.































































