ಟ್ರ್ಯಾಕ್ಟರ್‌ಗೆ ಶಾಲಾ ಬಸ್‌ ಡಿಕ್ಕಿ : ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸೇರಿ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆ ವೇಳೆಗೆ ಸಂಭವಿಸಿದೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಅಲ್ಪಾಂಖ್ಯಾತರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ‌ ಕಡೆ ಶಾಲಾ ಬಸ್​ನಲ್ಲಿ ಹೊರಡುವಾಗ ದುರಂತ ಸಂಭವಿಸಿದೆ.

































































error: Content is protected !!
Scroll to Top