ಫೆ. 11 : ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿ ಕಲ್ಕುಡ ಸಪರಿವಾರ ದೈವಗಳ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಕಾರ್ಕಳ : ಅತ್ತೂರು ಶ್ರೀ ಕ್ಷೇತ್ರ ಪರ್ಪಲೆಗಿರಿಯಲ್ಲಿ ಕಲ್ಕುಡ ಸಪರಿವಾರ ದೈವಗಳ ನೂತನ ಗರ್ಭಗುಡಿ ನಿರ್ಮಾಣಕ್ಕೆ ಫೆ. 11ರ ರವಿವಾರ ಬೆಳಿಗ್ಗೆ 9:58ಕ್ಕೆ ಶಿಲಾನ್ಯಾಸ ವಿಧಿ ನೆರವೇರಲಿದೆ. ಶ್ರೀ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಪೀಠಾಧಿಪತಿಗಳಾದ ಶ್ರೀ ಕಾಳಹಸ್ತೆಂದ್ರ ಮಹಾಸ್ವಾಮೀಜಿ ಶಿಲಾನ್ಯಾಸ ವಿಧಿ ನೆರವೇರಿಸಲಿರುವರು. ಎಲ್ಲೂರು ಸೀಮೆಯ ಆಗಮ ಪಂಡಿತ ಬ್ರಹ್ಮಶ್ರೀ ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.

ಸಭಾ ಕಾರ್ಯಕ್ರಮ

10:30ರ ಅನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದು, ಹೇರಂಬ ಇಂಡಸ್ಟ್ರೀಸ್‌ನ ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು.
ರಾ.ಸ್ವ. ಸಂಘ ಮಂಗಳೂರು ವಿಭಾಗ ಸಂಘ ಚಾಲಕ ಡಾ. ನಾರಾಯಣ ಶೆಣೈ, ಹಿಂ.ಜಾ.ವೇ ಪ್ರಾಂತ ಸಂಚಾಲಕ ಕೇಶವ ಮೂರ್ತಿ ಬೆಂಗಳೂರು, ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಯಶ್‌ಪಾಲ್ ಸುವರ್ಣ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅ‍ಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಉದ್ಯಮಿ ಮಹೇಶ್‌ ಶೆಟ್ಟಿ ಕುಡುಪುಲಾಜೆ, ಶಶಿಧರ ಶೆಟ್ಟಿ ಬರೋಡಾ, ಎಸ್‌ಕೆಎಫ್‌ ಆಡಳಿತ ನಿರ್ದೇಶಕ ರಾಮಕೃಷ್ಣ ಆಚಾರ್, ಪೂನಾ ಬಿಲ್ಲವ ಸಂಘದ ಅಧ್ಯಕ್ಷ ಕಡ್ತಲ ವಿಶ್ವನಾಥ ಪೂಜಾರಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಉದ್ಯಮಿ ಬೋಳ ದಾಮೋದರ ಕಾಮತ್, ವಸಂತ್ ಭಟ್, ನಿವೃತ್ತ ಲೆಕ್ಕಪರಿಶೋಧಕ ಕೆ. ಕಮಲಾಕ್ಷ ಕಾಮತ್‌, ಉದ್ಯಮಿಗಳಾದ ಶರತ್‌ ಸನಿಲ್‌, ಶಶಿಧರ್‌ ಶೆಟ್ಟಿ ಇನ್ನಂಜೆ, ಆನಂದ ಶೆಟ್ಟಿ ಮಿಯ್ಯಾರು, ರಾಜಾಪುರ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಶ್ರೀ ಕ್ಷೇತ್ರ ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್‌ ಅ‍ಧ್ಯಕ್ಷ ಪ್ರಶಾಂತ್‌ ನಾಯಕ್‌, ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಅಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಕಾರ್ಯಾಧ್ಯಕ್ಷ ಬೋಳ ಪ್ರಶಾಂತ್‌ ಕಾಮತ್‌, ಪ್ರಧಾನ ಕಾರ್ಯದರ್ಶಿ ಪ್ರಕಾಶ ಕುಕ್ಕೆಹಳ್ಳಿ, ಕೋಶಾಧಿಕಾರಿ ನಿತ್ಯಾನಂದ ಪೈ ತಿಳಿಸಿದ್ದಾರೆ.





























































































error: Content is protected !!
Scroll to Top