ಪಿ. ವಿ. ನರಸಿಂಹ ರಾವ್‌, ಚೌಧುರಿ ಚರಣ್‌ ಸಿಂಗ್‌, ಎಂ. ಎಸ್‌. ಸ್ವಾಮಿನಾಥನ್‌ ಅವರಿಗೆ ಭಾರತ ರತ್ನ ಘೋಷಣೆ

ದೆಹಲಿ : ಮಾಜಿ ಪ್ರಧಾನ ಮಂತ್ರಿಗಳಾದ ಪಿ. ವಿ. ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಎಂ. ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಾಮಾಜಿಕ ಮಾಧ್ಯಮ X ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ಭಾರತ ರತ್ನ ಘೋಷಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ ಮೂವರು ಮಹನೀಯರಿಗೆ ಭಾರತ ರತ್ನ ಪ್ರದಾನ ಮಾಡುವುದಾಗಿ ಘೋಷಿಸಿದೆ.









































error: Content is protected !!
Scroll to Top