ಹಿಂದೂಗಳ ತೆರಿಗೆ ಹಿಂದೂಗಳಅಭಿವೃದ್ಧಿಗೆ : ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್

ಮಂಗಳೂರು : ಕೇಂದ್ರ ಸರಕಾರ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ತಿರುಗೇಟು ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿಕೊಂಡ ಪೋಸ್ಟ್ ವಿವಾದಕ್ಕೆ ಕಾರಣವಾಗಿದೆ.

ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟು. ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು ಎಂದು ಹರೀಶ್‌ ಪೂಂಜಾ ಈ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಗುಂಡೂರಾವ್‌ ವಾಗ್ದಾಳಿ
ಈ ಪೋಸ್ಟ್‌ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅವರ ಪೋಸ್ಟ್‌ನ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ ಎನ್ನುವುದಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ದರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಮೊಂಡುವಾದ ಪ್ರದರ್ಶನ ಮಾಡಬಾರದು. 10 ವರ್ಷದಿಂದ ಅದೇ ಪ್ರಮಾಣದಲ್ಲಿ ಹಣ ಬರುತ್ತಿದೆ, ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಏನೂ ವೃದ್ಧಿಯಾಗಿಲ್ಲ ಎಂದಿದ್ದಾರೆ.

ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಬಂಧನ, ವಿರೋಧ ಪಕ್ಷದ ಬಂಧನವಾಗುತ್ತಿದೆ. ತನಿಖಾ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿವೆ. ಚಂಡೀಗಢ ಮೇಯರ್ ಚುನಾವಣೆ ಈ ಘಟನೆಗಳಿಗೆ ಸಾಕ್ಷಿ. ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಕುಸಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.







































error: Content is protected !!
Scroll to Top