ಫೆ. 15 : ಎನ್‍ಎಚ್‍ಎಂ ಗುತ್ತಿಗೆ ನೌಕರರ ಸಂಘದ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ : ಸಮುದಾಯ ಆರೋಗ್ಯ ಅಧಿಕಾರಿಗಳ (ಸಿಎಚ್‍ಒ) ಸೇವೆ ಖಾಯಂಗೊಳಿಸುವಿಕೆ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಫೆಬ್ರವರಿ 15ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‍ಎಚ್‍ಎಂ ಗುತ್ತಿಗೆ ನೌಕರರ ಸಂಘ ಕರೆ ನೀಡಿದೆ.

ರಾಜ್ಯದ 6,192 ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುವರು. ಆರೋಗ್ಯ ಇಲಾಖೆಯ ಸಂಬಂಧಪಟ್ಟ ಕಾರ್ಯಕ್ರಮದ ಅಧಿಕಾರಿಗಳು ಹಾಗೂ ರಾಷ್ಟೀಯಾ ಆರೋಗ್ಯ ಅಭಿಯಾನ ನಿರ್ದೇಶಕರಿಗೆ ಮತ್ತು ಆರೋಗ್ಯ ಸಚಿವರಿಗೆ ಹಲವು ಬಾರಿ ನಮ್ಮ ನೌಕರರ ಬೇಡಿಕೆಗಳು ಮತ್ತು ಕುಂದು ಕೊರತೆಗಳ ಬಗ್ಗೆ ಮನವಿ ಪತ್ರದ ಮೂಲಕ ಮನವರಿಕೆ ಮಾಡಿರುತ್ತೇವೆ ಆದರೆ ಇಲ್ಲಿವರೆಗೂ ಯಾವುದೇ ರೀತಿಯ ಪರಿಹಾರ ದೊರಕಿರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಬೇಡಿಕೆಗಳು
ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆ (ಸಿಪಿಎಚ್‍ಸಿ), ಯುಎಚ್‍ಸಿ ಮಾರ್ಗಸೂಚಿ ಅನ್ವಯ ಆರು ವರ್ಷ ಸೇವೆ ಪೂರೈಸಿದ ಎಲ್ಲಾ ಸಿಎಚ್‍ಒಗಳನ್ನು ಕಾಯಂ ಮಾಡಬೇಕು. ತಡೆಹಿಡಿದಿರುವ ಶೇ. 5ರಷ್ಟು ವಾರ್ಷಿಕ ವೇತನ ಮತ್ತು ಶೇ. 10 ಲಾಯಲ್ಟಿ ಬೋನಸ್ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ನೀಡಿದ 15% ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡ ಅನ್ವಯಿಸಬೇಕು. CPHC-UHC ಮಾರ್ಗ ಸೂಚಿಗಳ ಅನ್ವಯ ಮಾಸಿಕ ಪ್ರೋತ್ಸಾಹಧನ 15000/- ಗಳನ್ನು ಪಾವತಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳ ಕುಟುಂಬಕ್ಕೆ ಆರೋಗ್ಯ ವಿಮೆ ಹಾಗೂ ಫಿಎಫ್‌ ಒದಗಿಸಬೇಕು ಎಂದು ಉಡುಪಿ ಜಿಲ್ಲೆಯ ಸಮುದಾಯ ಅರೋಗ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಆಶಿಶ್ ಸೋನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.











































error: Content is protected !!
Scroll to Top