ಬೆಂಗಳೂರು : ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಪಂಜಾಬ್‌ನಲ್ಲಿ ಪ್ರತಿಯೊಬ್ಬ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದಾರೆ. ಮಾದಕವಸ್ತು ಬೆರೆಸಿದ ಚಾಕೋಲೆಟ್ ಮಾರುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ವ್ಯಸನಕ್ಕೆ ದೂಡುವುದು ದಂಧೆಕೋರರ ಉದ್ದೇಶವಿರಬಹುದು. ಇದಕ್ಕೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಲು ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ವಿಶ್ವಕ್ಕೆ ಸವಾಲಾಗಿರುವ ಡ್ರಗ್ಸ್ ದಂಧೆಯನ್ನು ಎದುರಿಸುವಲ್ಲಿ ಕೆಲ ಸಣ್ಣ ರಾಷ್ಟ್ರಗಳು ಸೋತು ಕೈಚೆಲ್ಲಿ ನಿಂತಿವೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದಂತೆ ಇನ್ನು ಕೆಲದೇಶಗಳು ಏನಾದರಾಗಲಿ ಎಂಬಂತೆ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದನ್ನು ನಿಲ್ಲಿಸಿ, ಸೋಲನ್ನು ಒಪ್ಪಿಕೊಂಡಿವೆ. ಇಂತಹ ದುಸ್ಥಿತಿ ನಮ್ಮ ದೇಶಕ್ಕೆ ಬರಬಾರದು. ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದರು.































































