ಕಾರ್ಕಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಪೂರ್ವಭಾವಿ ಸಭೆ ಫೆ. 7ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ, ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಅಧ್ಯಕ್ಷತೆಯಲ್ಲಿ ಜರುಗಿತು. ಬನ್ನಂಜೆಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಿಸಲು ನಿರ್ಣಯಿಸಲಾಯಿತು.
ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಪ್ರಕಾಶ್ ರಾವ್ ಕವಡೆ, ಕೇಂದ್ರ ಸಮಿತಿಯ ಗೌರವ ಸಲಹೆಗಾರ ಕೇಶವರಾವ್ ಮಾನೆ, ತಾಲೂಕು ಕೋಶಾಧಿಕಾರಿ ಸತೀಶ್ ರಾವ್ ಪವಾರ್, ಹರೀಶ್ ರಾವ್ ಅಸ್ವಾಲ್, ದಿನೇಶ್ ರಾವ್ ಉಪಸ್ಥಿತರಿದ್ದರು.






























































