ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ
ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ರಾಮಲಿಂಗಾ ರೆಡ್ಡಿ ವಿರುದ್ಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರಕಾರ ಇದ್ದ ಅವಧಿಯಲ್ಲಿ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿ ಮಾಡಬೇಕೆಂದು ಒತ್ತಾಯಿಸಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಪಾದಯಾತ್ರೆ ನಡೆಸಿತ್ತು.






























































