ಫೆ. 18 : ನೀರೆ ಬೈಲೂರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ 41ನೇ ವಾರ್ಷಿಕ ಮಹಾಸಭೆ

ಯಕ್ಷ ಸಾಂಗತ್ಯ ಮಿತ್ರ ಮಂಡಳಿಯಿಂದ ಮಹಿಷ ಮರ್ದಿನಿ ಯಕ್ಷಗಾನ

ಬೈಲೂರು : ನೀರೆ ಬೈಲೂರು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ 41ನೇ ವಾರ್ಷಿಕ ಮಹಾಸಭೆ ಫೆ. 18ರಂದು ಮಧ್ಯಾಹ್ನ 2ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಎಸ್. ದಿನೇಶ್ ಆಚಾರ್ಯ ವಹಿಸಲಿದ್ದು, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಕಟಪಾಡಿ ವೇಣುಗಿರಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನ ಆಡಳಿತ ಮೊಕ್ತಸರ ಪಡುಬಿದ್ರಿ ನವೀನ್ ಆಚಾರ್ಯ, ರಥ ಶಿಲ್ಪಿ ಸಾಣೂರು ಪದ್ಮನಾಭ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ವಿಶ್ವಕರ್ಮ ಕುಣಿತ ಭಜನಾ ಮಂಡಳಿಯ ಉದ್ಘಾಟನೆಯನ್ನು ಕುಕ್ಕುಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ರಮೇಶ್‌ ಆಚಾರ್ಯ ನೆರವೇರಿಸಲಿರುವರು.

ಸಭಾ ಕಾರ್ಯಕ್ರಮದ ಬಳಿಕ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕಾರ್ಕಳದ ಯಕ್ಷ ಸಾಂಗತ್ಯ ಮಿತ್ರ ಮಂಡಳಿ ವತಿಯಿಂದ ಶ್ರೀದೇವಿ ಮಹಾತ್ಮೆಯ – ಮಹಿಷ ಮರ್ದಿನಿ ಎಂಬ ಪುಣ್ಯ ಕಥಾ ಭಾಗವನ್ನು ಆಡಿತೋರಿಸಲಿರುವರು ಎಂದು ಸಂಘದ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top