ಡಾಂಬರು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಮಂಗಳೂರು: ಬೆಂಗಳೂರಿಗೆ ಡಾಂಬರು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿಯ ಉದನೆ ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ. ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಯ ಕಾರ್ಮಿಕರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಕಿಗೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ.

















































error: Content is protected !!
Scroll to Top