ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಶ್ರೀಧರ (42) ಮೃತ ವ್ಯಕ್ತಿ. ಇವರು ಬಾಯಿಯ ಕ್ಯಾನ್ಯರ್ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕಾಯಿಲೆ ಗುಣವಾಗದಿರುವ ಕೊರಗಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜ. 14 ರಾತ್ರಿ 10ಗಂಟೆಯಿಂದ ಜ. 15ರ ಬೆಳಿಗ್ಗೆ 10 ಗಂಟೆಯ ನಡುವಿನ ಅವಧಿಯಲ್ಲಿ ತನ್ನ ಮನೆಯ ತೋಟದ ಮಾವಿನ ಮರಕ್ಕೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಕುರಿತು ಪ್ರಸನ್ನ ಅವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.











































































error: Content is protected !!
Scroll to Top