ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 9 ಕೋಟಿ ಮೌಲ್ಯದ ಕೊಕೇನ್‌, 920 ಗ್ರಾಂ ಡ್ರಗ್ಸ್ ವಶ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಫೆ. 9ರಂದು ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾಗ ಆತನನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದ 40 ವರ್ಷದ ಪ್ರಯಾಣಿಕನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತನ ಹೊಟ್ಟೆಯಲ್ಲಿ ಕೊಕೇನ್ ಇರುವುದು ಪತ್ತೆಯಾಗಿದೆ. ನಂತರ 920 ಗ್ರಾಂ ಕೊಕೇನ್ 91 ಕ್ಯಾಪ್ಸುಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ (ಎನ್‌ಡಿಪಿಎಸ್) ಕಾಯಿದೆ, 1985ರ ಅಡಿಯಲ್ಲಿ ಬಂಧಿಸಲಾಗಿದೆ.



















































































error: Content is protected !!
Scroll to Top