ಕಾರ್ಕಳ : ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ ಫೆ. 19ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಮಂಡಳಿ ಕಾರ್ಕಳ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ರಿ. ಬೆಂಗಳೂರ, ತಾಲೂಕು ಘಟಕ, ಕ್ಷತ್ರೀಯ ಮರಾಠ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ 10.30ಕ್ಕೆ ನಡೆಯಲಿರುವುದು. ವಿಶೇಷ ಉಪನ್ಯಾಸವನ್ನು ನಿಟ್ಟೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್ ವಿನಾಯಕ್ ಕಾಮತ್ ನೀಡಲಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ. ಸುನಿಲ್ ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿ ಗಣ್ಯರಾಗಿ ಕೇಂದ್ರ ಕೃಷಿ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ವಿವಿಧ ಶಾಸಕರು ಹಾಗೂ ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿ, ಹಿರಿಯಂಗಡಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಿರೀಶ್ ರಾವ್, ಕ್ಷತ್ರೀಯ ಮರಾಠ ಸಮಾಜದ ಅಧ್ಯಕ್ಷ ಶುಭದ ರಾವ್, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ರಿ. ಬೆಂಗಳೂರು ತಾಲೂಕು ಘಟಕದ ಅಧ್ಯಕ್ಷ ಕೆ. ಬಿ. ಕೀರ್ತನ್ ಕುಮಾರ್ ಲಾಡ್ ಭಾಗವಹಿಸಲಿರುವರು. ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಕಾರ್ಯಕ್ರಮದ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.









































