ಹೊಸದಿಲ್ಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.
ಗುಲ್ಜಾರ್ ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ ಮತ್ತು ಈ ಕಾಲದ ಅತ್ಯುತ್ತಮ ಉರ್ದು ಕವಿಗಳಲ್ಲಿ ಅವರು ಒಬ್ಬರು ಎಂದು ಪರಿಗಣಿಸಲಾಗಿದೆ. ಈ ಹಿಂದೆ 2002 ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004ರಲ್ಲಿ ಪದ್ಮಭೂಷಣ ಮತ್ತು ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ. ಅವರು 100ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.
ರಾಮಭದ್ರಾಚಾರ್ಯ, ಗುಲ್ಜಾರ್ಗೆ ಜ್ಞಾನಪೀಠ ಪ್ರಶಸ್ತಿ









































