ಕಾರ್ಕಳ : ಬಿಜೆಪಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ ಫೆ. 18ರಂದು ಪ್ರಕಟಗೊಂಡಿದ್ದು, ಕಾರ್ಕಳ ಹೆಬ್ರಿ ತಾಲೂಕಿನಿಂದ ಒಟ್ಟು 6 ಮಂದಿ ಜಿಲ್ಲಾ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ, ಕಾರ್ಕಳ ಬಿಜೆಪಿ ನಿಕಟಪೂರ್ವ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಹಾಗೂ ಕಾರ್ಕಳ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಬೋಳ ಜಯರಾಮ ಸಾಲ್ಯಾನ್, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಜಿ.ಪಂ. ಮಾಜಿ ಸದಸ್ಯೆ ರೇಶ್ಮಾ ಉದಯ ಶೆಟ್ಟಿ, ಕಾರ್ಯದರ್ಶಿಯಾಗಿ ಜಿ. ಪಂ. ಮಾಜಿ ಸದಸ್ಯ ಉದಯ ಕೋಟ್ಯಾನ್, ಜಿಲ್ಲಾ ವಕ್ತಾರರಾಗಿ ಕಾರ್ಕಳ ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಮತ್ತು ಸಾಮಾಜಿಕ ಜಾಲತಾಣ ಸಂಯೋಜಕರಾಗಿ ಸುದೀಪ್ ನಿಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ – ಕಾರ್ಕಳದಿಂದ 6 ಮಂದಿ ನೇಮಕ

























